ಭಾರೀ ಮಳೆಗೆ ಬೈಕ್ ಮೇಲೆ ಮರ ಬಿದ್ದು ಬಾಲಕಿ ಸಾವು.!
ಬೆಂಗಳೂರು : ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಶನಿವಾರ ಸಂಜೆ ಸುರಿದ ಮಳೆಗೆ ಜೀವನಹಳ್ಳಿಯ ಪೂರ್ವ ಪಾರ್ಕ್ ಬಳಿ ಇದ್ದ ಮರದ ಕೊಂಬೆಯೊಂದು ಬೈಕ್ ಮೇಲೆ ಮುರಿದು ಬಿದ್ದು ಮೂರು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ತಂದೆಯ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಮರವೊಂದು ಬಾಲಕಿ ರಕ್ಷಾ ಮೇಲೆ ಬಿದ್ದಿದೆ. ಮರ ಬಿದ್ದು ತೀವ್ರ ಗಾಯಗೊಂಡಿದ್ದ ಬಾಲಕಿಯನ್ನು ಪೋಷಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ.
ಸದ್ಯ ಈ ಘಟನೆಗೆ ಸಂಬಂಧಪಟ್ಟಂತೆ ಪುಲಕೇಶಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

