SSLC ಪರೀಕ್ಷೆ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಳಗಾವಿ : SSLC ಪರೀಕ್ಷೆ ಹಿನ್ನಲೆಯಲ್ಲಿ ಇಂದು ಬರೆದ ವಿಷಯದಲ್ಲಿ ಫೇಲ್ ಆಗುವ ಭಯದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಫಾರೆಸ್ಟ್ ಕಾಲನಿಯಲ್ಲಿ ನಡೆದಿದೆ.
ದೀಪಿಕಾ ರಾಜೇಂದ್ರ ಬಡಿಗೇರ (16) ಮೃತ ವಿದ್ಯಾರ್ಥಿನಿ. SSLC ಪರೀಕ್ಷೆಯಲ್ಲಿ ಫೇಲಾಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಇಂದು ಎರಡನೇ ವಿಷಯದ ಪರೀಕ್ಷೆಯನ್ನು ವಿದ್ಯಾರ್ಥಿನಿ ಬರೆದು ಬಂದಿದ್ದಳು ಎನ್ನಲಾಗಿದೆ.ಸಂಜೆ ಮನೆಗೆ ವಾಪಸ್ ಕುಟುಂಬಸ್ಥರು ಬಂದಾಗ ಘಟನೆ ಬೆಳಕಿಗೆ ಬಂದಿದ್ದು ವಿದ್ಯಾರ್ಥಿನಿಯ ಸಾವಿನಿಂದ ಪೋಷಕರ ಆಕ್ರಂದಣ ಮುಗಿಲು ಮುಟ್ಟಿದೆ.
ಇನ್ನು ಘಟನಾ ಸ್ಥಳಕ್ಕೆ ಎಪಿಎಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಪ್ರಕರಣ ದಾಖಲಿಸಿದ್ದಾರೆ.


