ಯತ್ನಾಳ್ ಉಚ್ಚಾಟನೆ ವಿರೋಧಿಸಿ ಬೀದಿಗಿಳಿಯಿರಿ ; ಕೂಡಲಸಂಗಮ ಶ್ರೀ ಕರೆ
ಧಾರವಾಡ : ಬಿಜೆಪಿ ರಾಜ್ಯ ನಾಯಕರ ಕುತಂತ್ರದಿಂದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಉಚ್ಚಾಟನೆ ಆಗಿದ್ದು ಕೂಡಲೇ ಹೈಕಮಾಂಡ್ ತನ್ನ ನಿರ್ಧಾರದಿಂದ ವಾಪಸ್ ಬರಬೇಕು. ಇಲ್ಲವಾದಲ್ಲಿ ಜನ ಬೀದಿಗಿಳಿದು ಹೋರಾಟ ಮಾಡುತ್ತಾರೆ ಎಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಶ್ರೀ ಹೇಳಿದರು.
ಧಾರವಾಡದಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಇವರು. ಬಿಜೆಪಿಯಿಂದ ಯತ್ನಾಳ್ ಉಚ್ಚಾಟನೆ ಕುರಿತು ಗುರುವಾರ ಇಂದು ಬೆಳಗಾವಿಯಲ್ಲಿ ಸಮಾಜದ ಮುಖಂಡರ ಸಭೆ ಕರೆಯಲಾಗಿದೆ. ಇನ್ನೂ ಗ್ರಾಮ ಮಟ್ಟದಿಂದ ಕಾರ್ಯಕರ್ತರು ಯತ್ನಾಳ್ ಉಚ್ಚಾಟನೆ ವಿರೋಧಿಸಿ ಪ್ರತಿಭಟನೆ ಮಾಡುವಂತೆ ಕರೆ ನೀಡಿದರು.
ಉತ್ತರ ಕರ್ನಾಟಕ ಭಾಗದ ದೊಡ್ಡ ಸಮುದಾಯದ ಮುಖಂಡರಾದ ಬಸನಗೌಡ ಪಾಟೀಲ ಯತ್ನಾಳ್ ವಿಚಾರವಾಗಿ ಬಿಜೆಪಿ ಹೈಕಮಾಂಡ್ ತಪ್ಪು ನಿರ್ಧಾರ ಕೈಗೊಂಡಿದ್ದು, ಇದಕ್ಕೆ ತಕ್ಕ ಉತ್ತರ ನೀಡುತ್ತೇವೆ ಎಂದರು.


