ಬೆಳಗಾವಿಗೆ ಕೀರ್ತಿ ತಂದ ಇಬ್ಬರು ವಿದ್ಯಾರ್ಥಿನಿಯರು ; ಪಿಯುಸಿಯಲ್ಲಿ ವಿಶಿಷ್ಟ ಸಾಧನೆ
ಬೆಳಗಾವಿ : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಕುಂದಾನಗರಿಯ ಇಬ್ಬರು ವಿದ್ಯಾರ್ಥಿನಿಯರು ವಿಶಿಷ್ಟ ಸಾಧನೆ ಮಾಡಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ.
ಬೆಳಗಾವಿ ನಗರದ ಗೋಗಟೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ತನ್ವಿ ಹೇಮಂತ ಪಾಟೀಲ್ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆಯುವ ಮೂಲಕ ಸಾಧನೆಗೈದಿದ್ದಾರೆ.
600 ಅಂಕಗಳ ಪೈಕಿ ತನ್ವಿ ಪಾಟೀಲ 597 ಅಂಕ ಪಡೆದಿದ್ದಾರೆ. ಇಂಗ್ಲೀಷ 97, ಹಿಂದಿ 100, ಅರ್ಥಶಾಸ್ತ್ರ 100, ಲೆಕ್ಕಶಾಸ್ತ್ರ 100, ವ್ಯವಹಾರ ಅಧ್ಯಯನ 100, ಸಂಖ್ಯಾಶಾಸ್ತ್ರ 100 ಅಂಕ ಗಳಿಸಿದ್ದಾರೆ.
ಚಿಕ್ಕೋಡಿ ತಾಲ್ಲೂಕಿನ ಮಜಲಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕಾವೇರಿ ಮಲ್ಲಾಪುರೆ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದಿದ್ದಾರೆ.
600 ಅಂಕಗಳ ಪೈಕಿ 594 ಅಂಕ ಗಳಿಸಿದ್ದು, ರಾಜ್ಯಕ್ಕೆ ಐದನೇ ಸ್ಥಾನ ಪಡೆದುಕೊಂಡಿದ್ದಾರೆ. ಕನ್ನಡ 99, ಇಂಗ್ಲೀಷ 97, ಇತಿಹಾಸ 99, ಅರ್ಥಶಾಸ್ತ್ರ 100, ಸಮಾಜಶಾಸ್ತ್ರ 100, ರಾಜ್ಯಶಾಸ್ತ್ರ 99 ಅಂಕ ಗಳಿಸಿದ್ದಾರೆ.


