Select Page

Advertisement

ಬೆಳಗಾವಿಯಲ್ಲಿ ಮುಂದುವರಿದ ಸಾವಿನ ಸರಣಿ ; ಆ್ಯಂಬುಲೆನ್ಸ್ ಚಾಲಕ ಆತ್ಮಹತ್ಯೆ

ಬೆಳಗಾವಿಯಲ್ಲಿ ಮುಂದುವರಿದ ಸಾವಿನ ಸರಣಿ ; ಆ್ಯಂಬುಲೆನ್ಸ್ ಚಾಲಕ ಆತ್ಮಹತ್ಯೆ

ಬೆಳಗಾವಿ : ಸಂಬಳ ನೀಡದಿದ್ದಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಆ್ಯಂಬುಲೆನ್ಸ್ ಡ್ರೈವರ್ ಆತ್ಮಹತ್ಯೆ ಮಾಡಿಕೊಂಡ‌ ಘಟನೆ ಭಾನುವಾರ ಶಹಾಪುರದಲ್ಲಿ‌ ನಡೆದಿದೆ.

ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಓಂಕಾರ ಪವಾರ್(25) ನೇಣು‌ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶಹಾಪುರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಓಂಕಾರ್ ಕಳೆದ ನಾಲ್ಕು ತಿಂಗಳ ಸಂಬಳ ನೀಡಿದೇ ಸತಾಯಿಸುತ್ತಿದ್ದ ಆಸ್ಪತ್ರೆಯವರು ಸಂಬಳಕ್ಕಾಗಿ ಮನವಿ ಮಾಡಿದರೂ ಸ್ಪಂದನೆ ನೀಡಿದ ಹಿನ್ನೆಲೆಯಲ್ಲಿ ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಾಲ್ಕು ವರ್ಷದ ಹಿಂದೆ ಮದುವೆಯಾಗಿದ್ದ ಓಂಕಾರ್ ಗೆ ಓರ್ವ ಮಗು ಇದೆ. ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಘಟನೆ ನಂತರ ಖಾಸಗಿ ಆಸ್ಪತ್ರೆ ವಿರುದ್ಧ ಚಾಲಕರ ಮಂಡಳಿ ಆಕ್ರೋಶ ಹೊರಹಾಕಿದೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ‌.

Advertisement

Leave a reply

Your email address will not be published. Required fields are marked *

error: Content is protected !!