Select Page

Advertisement

ಇಬ್ಬರ ಜೀವ ಪಡೆದ ಚರಂಡಿ ; ಈ ಸಾವು ನ್ಯಾಯವೇ…?

ಇಬ್ಬರ ಜೀವ ಪಡೆದ ಚರಂಡಿ ; ಈ ಸಾವು ನ್ಯಾಯವೇ…?


ಬೆಳಗಾವಿ : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಮೃತ ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಒಳ ಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಗಾಂಧಿ ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ.

ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದ ಶಿವಲಿಂಗ ಮಾರುತಿ ಸರವೆ (20) ಹಾಗೂ ಬಸವರಾಜ ಸರವೆ (38) ಮೃತ ದುರ್ದೈವಿಗಳು. ‌ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು ಇಬ್ಬತ್ತು ಅಡಿ ಆಳದಲ್ಲಿ ಒಳ ಚರಂಡಿ ಪೈಪ್ ಲೈನ್ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಮಣ್ಣು ಕುಸಿದಿದೆ.

ಮಣ್ಣಿನಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರನ್ನು ಜೆಸಿಬಿ ಸಹಾಯದಿಂದ ಹೊರ ತಗೆದರು ಬದುಕಿಸಲು ಸಾಧ್ಯವಾಗಲಿಲ್ಲ. 15 ಅಡಿಯಷ್ಟು ಮಣ್ಣು ಬಿದ್ದ ಕಾರಣ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು.

ಬಿಮ್ಸ್ ಆಸ್ಪತ್ರೆಯಲ್ಲಿ ಮೃತ ಕಾರ್ಮಿಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

Leave a reply

Your email address will not be published. Required fields are marked *

error: Content is protected !!