ರಾಯಚೂರು : ಬೊಲೆರೋ ಪಿಕಪ್ ವಾಹನವು ಹೆದ್ದಾರಿಯ ಬಳಿಯ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶುಕ್ರವಾರ ದೇವದುರ್ಗ ತಾಲೂಕಿನ ಅಮರಾಪುರ ಗ್ರಾಮದ ಬಳಿ ನಡೆದಿದೆ.
ನಾಲ್ವರೂ ಸಹ ತೆಲಂಗಾಣ ಮೂಲದವರಾಗಿದ್ದು ಮೃತರನ್ನು ನಾಗಭೂಷಣ, ಮುರಳಿ, ಸೋಮ ಹಾಗೂ ನಾಗರಾಜ್ ಎಂದು ಗುರುತಿಸಲಾಗಿದೆ.
ನಾಲ್ವರೂ ಸಹ ಹಿಂದೂಪುರದಿಂದ ಹೊರಟು ಶಹಾಪುರ ಸಂತೆಯಲ್ಲಿ ಕುರಿಗಳನ್ನು ಖರೀದಿಸಲು ತೆರಳುತ್ತಿದ್ದರು.
ಮೃತ ದೇಹಗಳನ್ನು ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಗಬ್ಬೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.
ಭೀಕರ ರಸ್ತೆ ಅಪಘಾತ ; ಸ್ಥಳದಲ್ಲೇ ನಾಲ್ವರು ಸಾವು



