Select Page

ಅಥಣಿ : ಬಾಲಕಿ‌‌ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ಬಂಧನ

ಅಥಣಿ : ಬಾಲಕಿ‌‌ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ಬಂಧನ


ಅಥಣಿ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಐಗಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಹಾಂತೇಶ್ ಹಿಪ್ಪರಗಿ ಬಂಧಿತ ಆರೋಪಿ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ 13 ವರ್ಷದ ಬಾಲಕಿ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪ ಕೇಳಿಬಂದಿತ್ತು.

ಈ ಕುರಿತು ಬಾಲಕಿ ಪೋಷಕರು ಆರೋಪಿ ವಿರುದ್ಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಐಗಳಿ ಠಾಣೆ ಪೋಲಿಸರು ವಶಕ್ಕೆ ಪಡೆದು ಜೈಲಿಗೆ ಹಾಕಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!