ಪುತ್ರನ ರಾಜಕೀಯ ಭವಿಷ್ಯದ ಕುರಿತು ಮಹತ್ವದ ಸುಳಿವು ಕೊಟ್ಟ ಸಾಹುಕಾರ್
ಬೆಳಗಾವಿ : ಯುವ ಕಾಂಗ್ರೆಸ್ ಘಟಕದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಸಕ್ರಿಯ ರಾಜಕಾರಣಕ್ಕೆ ಬಂದಿರುವ ಸಚಿವ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಮುಂಬರುವ ಡಿಸಿಸಿ ಬ್ಯಾಂಕ್ ಚುನಾವಣೆ ಸ್ಪರ್ಧೆ ಕುರಿತು ಸಾಕಷ್ಟು ಚರ್ಚೆ ನಡೆದಿವೆ.
ಈ ಮಧ್ಯೆ ಸಚಿವ ಸತೀಶ್ ಜಾರಕಿಹೊಳಿ ಪುತ್ರನ ರಾಜಕೀಯ ಭವಿಷ್ಯದ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಈಗಾಗಲೇ ಡಿಸಿಸಿ ಬ್ಯಾಂಕ್ ಆಡಳಿತ ವ್ಯವಸ್ಥೆ ಜಾರಕಿಹೊಳಿ ಮನೆತನದ ಹಿಡಿತದಲ್ಲಿದ್ದರೂ ಯಾರೂ ಆಡಳಿತ ಮಂಡಳಿ ಸದಸ್ಯರಾಗಿಲ್ಲ.
ಸಧ್ಯ ಡಿಸಿಸಿ ಬ್ಯಾಂಕ್ ಮೇಲೆ ಕಣ್ಣಿಟ್ಟಿರುವ ಜಾರಕಿಹೊಳಿ ಕುಟುಂಬದ ಕುಡಿ ರಾಹುಲ್ ಜಾರಕಿಹೊಳಿ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಪಿಕೆಪಿಎಸ್ ನಿಂದ ಡಿಸಿಸಿ ಬ್ಯಾಂಕ್ ಚುನಾವಣಾ ಅಖಾಡಕ್ಕೆ ಇಳಿಯುತ್ತಾರೆ ಎಂಬ ಚರ್ಚೆ ಜೋರಾಗಿ ನಡೆದಿವೆ.
ಈ ಕುರಿತು ಸ್ಪಷ್ಟನೆ ನೀಡಿದ ಸಚಿವ ಸತೀಶ್. ನಡೆದ ಕೆಪಿಸಿಸಿ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಸ್ಫರ್ಧೆ ಮಾಡುವ ಕುರಿತು ಇನ್ನು ಮುಖಂಡರ ಜತೆ ಚರ್ಚಿಸಿಲ್ಲ.
ಈ ಕುರಿತು ಮುಖಂಡರ ಮತ್ತು ಸೊಸೈಟಿ ಸದಸ್ಯರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.


