Select Page

Advertisement

ಅರೆಸ್ಟ್ ಆಗ್ತಾರಾ ಶಾಸಕ ವಿನಯ್ ಕುಲಕರ್ಣಿ…?

ಅರೆಸ್ಟ್ ಆಗ್ತಾರಾ ಶಾಸಕ ವಿನಯ್ ಕುಲಕರ್ಣಿ…?


ಬೆಂಗಳೂರು : ಬಹುಕೋಟಿ ಮೌಲ್ಯದ ಚಿನ್ನ ವಂಚನೆ ಪ್ರಕರಣದಲ್ಲಿ ತಳಕು ಹಾಕಿಕೊಂಡಿರುವ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿಯನ್ನು ಜಾರಿ ನಿರ್ದೇಶನಾಲಯ(ಇ.ಡಿ) ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ.

ಗುರುವಾರದಿಂದಲೇ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ವಿನಯ್‌ ಕುಲಕರ್ಣಿ ನಿವಾಸದಲ್ಲಿ ದಾಳಿ ನಡೆಸಿರುವ ಇ.ಡಿ ಅಧಿಕಾರಿಗಳು ಕೆಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಇಂದು ಕೂಡ ಪರಿಶೀಲನೆ ಮುಂದುವರೆದಿದ್ದು, ಪ್ರಕರಣದಲ್ಲಿ ವಿನಯ್‌ ಕುಲಕರ್ಣಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗೆ ಇ.ಡಿ ಅಧಿಕಾರಿಗಳು ಬಂಧಿಸುವ ಸಾಧ್ಯತೆ ಇದೆ ಎಂದು ಇ.ಡಿ ಮೂಲಗಳು ತಿಳಿಸಿವೆ.

ಗುರುವಾರಷ್ಟೇ ಈ ಪ್ರಕರಣದ ಕಿಂಗ್‌ಪಿನ್‌ ಎಂದೇ ಹೇಳಲಾಗುತ್ತಿರುವ ವಂಚಕಿ ಐಶ್ವರ್ಯ ಗೌಡ ಅವರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದು ಬಂಧಿಸಿ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ 14 ದಿನಗಳ ಕಾಲ ತಮ ವಶಕ್ಕೆ ಪಡೆದಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!