ಪಾಕಿಸ್ತಾನ ವಿರುದ್ಧ ಯುದ್ಧ ಬೇಡ ; ನಾನು ಶಾಂತಿಪ್ರಿಯ ಎಂದ ಸಿಎಂ ಸಿದ್ದರಾಮಯ್ಯ
ಮೈಸೂರು : ಜಮ್ಮು ಕಾಶ್ಮೀರ ಜನರಿಗೆ ಕೇಂದ್ರ ಸರಕಾರ ಭದ್ರತೆ ನೀಡಲಿ, ನಾನು ಶಾಂತಿಪ್ರಿಯ ಯುದ್ಧ ಮಾಡುವ ಅಗತ್ಯ ಇಲ್ಲ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಇವರು. ನಾವು ಯುದ್ಧದ ಪರವಲ್ಲ, ಶಾಂತಿ ಇರಬೇಕು ಜನರಿಗೆ ಭದ್ರತೆ ಇರಬೇಕು, ಕೇಂದ್ರ ಸರಕಾರ ಭದ್ರತಾ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಆಗ್ರಹಿಸಿದ್ದಾರೆ.
ಪಾಕಿಸ್ತಾನಿ ಪ್ರಜೆಗಳನ್ನು ಹೊರ ಹಾಕುವ ವಿಚಾರವಾಗಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇವೆ. ರಾಜ್ಯದಲ್ಲಿ ಎಷ್ಟು ಜನ ಇದ್ದಾರೆ ಎಂಬುದರ ಮಾಹಿತಿ ಪಡೆದು ಕ್ರಮ ಜರುಗಿಸುವ ಕೆಲಸ ಮಾಡುತ್ತೇವೆ ಎಂದರು.


