ಯುದ್ಧ ಬೇಡ ಎಂದ ಸಿಎಂ ಸಿದ್ದರಾಮಯ್ಯ ಸಧ್ಯ ಪಾಕಿಸ್ತಾನ ಮಾಧ್ಯಮದಲ್ಲಿ Hero…!
ಬೆಂಗಳೂರು : ನಾನು ಶಾಂತಿಪ್ರಿಯ ಪಾಕಿಸ್ತಾನ ದೇಶದೊಂದಿಗೆ ಯುದ್ಧ ಬೇಡ ಎಂದ ರಾಜ್ಯದ ಸಿಎಂ ಸಿದ್ದರಾಮಯ್ಯ ಅವರನ್ನು ಪಾಕಿಸ್ತಾನ ಮಾಧ್ಯಮಗಳು ಹಾಡಿ ಹೊಗಳಿವೆ.
ಭಾರತದಲ್ಲಿ ಆಂತರಿಕ ಬಿಕ್ಕಟ್ಟು ಹೆಚ್ಚಾಗುತ್ತಿದೆ. ಪಾಕಿಸ್ತಾನದ ವಿರುದ್ಧ ಯುದ್ಧ ಮಾಡದಂತೆ ಮುಖ್ಯಮಂತ್ರಿಗಳು ಹೇಳುತ್ತಿದ್ದಾರೆ ಎಂಬ ರೀತಿಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ಪಾಕಿಸ್ತಾನ ಮೀಡಿಯಾಗಳು ಬಳಸಿಕೊಂಡಿವೆ.
ಸದ್ಯ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯಿಂದ ಅವರದೇ ಪಕ್ಷದ ನಾಯಕರು ಅಂತರ ಕಾಯ್ದುಕೊಂಡಿದ್ದಾರೆ. ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ. ಕೇಂದ್ರ ಸರಕಾರದ ನಿರ್ಧಾರಕ್ಕೆ ನಾವು ಬಬಲ ಸೂಚಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.
27 ಜನ ಅಮಾಯಕ ಭಾರತೀಯರ ಸಾವಿಗೆ ಕಾರಣರಾದ ಪಾಕಿಸ್ತಾನಿ ಉಗ್ರಗಾಮಿಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ಭಾರತೀಯರ ಮಧ್ಯ ಸಿಎಂ ಸಿದ್ದರಾಮಯ್ಯ ಅವರ ಯುದ್ಧ ಬೇಡ ಎಂಬ ಹೇಳಿಕೆ ಮತ್ತಷ್ಟು ಚರ್ಚೆ ಪಡೆದುಕೊಂಡಿದೆ.


