ಕಾಂಗ್ರೆಸ್ ಸಮಾವೇಶದಲ್ಲಿ ಪ್ರತಿಭಟನೆ ; ಜೈಲು ಸೇರುತ್ತಾರಾ ಬಿಜೆಪಿ ಮಹಿಳಾ ಕಾರ್ಯಕರ್ತೆಯರು
ಬೆಳಗಾವಿ : ಸಿಎಂ ಸಿದ್ದರಾಮಯ್ಯ ಅವರ ಕಾಂಗ್ರೆಸ್ ಸಮಾವೇಶದಲ್ಲಿ ಪ್ರತಿಭಟನೆ ನಡೆಸಿದ್ದು ಮಾತ್ರವಲ್ಲದೆ ಕಪ್ಪು ಬಟ್ಟೆ ಪ್ರದರ್ಶನ ಮಾಡಿದ್ದ ಬಿಜೆಪಿ ಮಹಿಳಾ ಕಾರ್ಯಕರ್ತೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಧ್ಯ ಪೊಲೀಸ್ ವಶದಲ್ಲಿರುವ ಬಿಜೆಪಿ ಕಾರ್ಯಕರ್ತೆಯರನ್ನು ಬೆಳಗಾವಿಯ ವಂಟಮೂರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯಕೀಯ ತಪಾಸಣೆಗೆ ಕರೆತರಲಾಗಿದೆ.
ಟಿಳಕವಾಡಿ ಸಿಪಿಐ ಪರುಶರಾಮ ಪೂಜಾರಿ, ಕ್ಯಾಂಪ್ ಪಿಎಸ್ಐ ರುಕ್ಮಿಣಿ ಬಿಜೆಪಿ ಕಾರ್ಯಕರ್ತೆಯರನ್ನು ವಶಕ್ಕೆ ಪಡೆದಿದ್ದು ಕೋರ್ಟ್‌ಗೆ ಹಾಜರುಪಡಿಸುವ ಸಾಧ್ಯತೆ ಇದೆ.
ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರೆ ಇಂದೇ ಬಿಜೆಪಿ ಕಾರ್ಯಕರ್ತೆಯರು ಹಿಂಡಲಗಾ ಜೈಲಿಗೆ ರವಾನೆ ಮಾಡುವ ಸಾಧ್ಯತೆ ದಟ್ಟವಾಗಿದೆ.


