SSLC ಫಲಿತಾಂಶ ವೀಕ್ಷಿಸಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
ಬೆಂಗಳೂರು : SSLC ಫಲಿತಾಂಶಕ್ಕಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ನಾಳೆಯೇ ಶುಕ್ರವಾರ ಫಲಿತಾಂಶ ಹೊರಬೀಳಲಿದೆ.
ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ನಾಳೆಯೇ ಫಲಿತಾಂಶ ಎಂದು ತಿಳಿಸಿದೆ.
ಶುಕ್ರವಾರ ಮಧ್ಯಾಹ್ನ 12 : 30 ಕ್ಕೆ ಫಲಿತಾಂಶ ಘೋಷಣೆ ಆಗಲಿದ್ದು ಈ ಕೆಳಗೆ ಕೊಟ್ಟಿರುವ ಅಧಿಕೃತ ಜಾಲತಾಣಕ್ಕೆ ಭೇಟಿನೀಡಿ ಫಲಿತಾಂಶ ವೀಕ್ಷಿಸಬಹುದು.
https://karresults.nic.in/
ರಾಜ್ಯಾದ್ಯಂತ ಸುಮಾರು 10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಮಾರ್ಚ ಹಾಗೂ ಏಪ್ರಿಲ್ ತಿಂಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.


