Select Page

Advertisement

ನಡು ರಸ್ತೆಯಲ್ಲೇ ಹಿಂದೂಪರ ಕಾರ್ಯಕರ್ತನ ಬರ್ಬರ ಹತ್ಯೆ

ನಡು ರಸ್ತೆಯಲ್ಲೇ ಹಿಂದೂಪರ ಕಾರ್ಯಕರ್ತನ ಬರ್ಬರ ಹತ್ಯೆ


ಮಂಗಳೂರು : ರೌಡಿ ಶೀಟರ್ ಹಾಗೂ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿ ಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಬಜಪೆ ಕಿನ್ನಿಪದವು ಸಮೀಪ ನಡೆದಿದೆ.

ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಸುಹಾಸ್ ಶೆಟ್ಟಿಯನ್ನೂ ಖಾಸಗಿ ಆಸ್ಪತ್ರೆಯ ದಾಖಲಿಸಲಾಗಿದ್ದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾ. ಆಸ್ಪತ್ರೆಯ‌ ಸುತ್ತ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಸುಹಾಸ್ ಶೆಟ್ಟಿ, ಈ ಹಿಂದೆ ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯ. 2022ರ ಜುಲೈ 28ರಂದು ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಎನ್ನಲಾಗಿದೆ. ಈ ಕೊಲೆಯು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಗೆ ಪ್ರತೀಕಾರವಾಗಿ ನಡೆದಿತ್ತು ಎಂದು ತನಿಖೆಯಲ್ಲಿ ತಿಳಿದುಬಂದಿತ್ತು.

ರಾತ್ರಿ 8.27ರ ಸುಮಾರಿಗೆ ಕಿನ್ನಿಪದವು ಪೇಟೆಯಲ್ಲಿ ಸುಹಾಸ್ ಶೆಟ್ಟಿ ಸಂಚರಿಸುತ್ತಿದ್ದ ಕಾರಿಗೆ ಮೀನಿನ ಪಿಕ್ ಅಪ್ ದಿಕ್ಕಿ ಹೊಡೆದು ಪಕ್ಕದಲ್ಲಿದ್ದ ಅಂಗಡಿಗೆ ನುಗ್ಗಿತ್ತು. ಆ ಬಳಿಕ ಮಾತಿನ ಚಕಮಕಿ ನಡೆದು ಹೊಡೆದಾಟ ಆರಂಭಗೊಂಡಿದ್ದು, ಆರೋಪಿಗಳು ಮಾರಕಾಸ್ತ್ರದಿಂದ ಕೊಚ್ಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸ್ಥಳದಲ್ಲಿ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದು, ಕೃತ್ಯ ನಡೆದಿರುವ ಸ್ಥಳವನ್ನು ಬಂದ್ ಮಾಡಿದ್ದಾರೆ. ಆಸ್ಪತ್ರೆಗೆ ಬಿಜೆಪಿ ನಾಯಕರು ಆಗಮಿಸಿದ್ದಾರೆ. ಅಲ್ಲದೆ ಆಸ್ಪತ್ರೆಯ ಸುತ್ತ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ.‌ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!