ಹುಬ್ಬಳ್ಳಿ : ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕುಸುಗಲ್ ಗ್ರಾಮದ ಬಳಿಯ ಇಂಗಳಹಳ್ಳಿ ಕ್ರಾಸ್ ಬಳಿ ನಡೆದಿದೆ.

ವಿಜಯಪುರ ಕಡೆಯಿಂದ ಹುಬ್ಬಳ್ಳಿಗ್ಗೆ ಬರುತ್ತಿದ್ದ ಕಾರು ಚಾಲಕ ನಿಯಂತ್ರಣ ತಪ್ಪಿ ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ ಡಿಕ್ಕಿಯಾದ ರಬಸಕ್ಕೆ ಕಾರಿನಲ್ಲಿದ್ದ 5 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರು ಶ್ವೇತ (29), ಅಂಜಲಿ(26), ಸಂದೀಪ್ (26), ವಿಠಲ್ (55) ಹಾಗೂ ಶಶಿಕಲಾ (40) ಎಂದು ಗುರುತಿಸಲಾಗಿದೆ.

ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರದವರಾಗಿದ್ದು, ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದರು. ಮರಳಿ ಹುಬ್ಬಳ್ಳಿ ಮಾರ್ಗವಾಗಿ ಶಿವಮೊಗ್ಗ ಕಡೆ ಬರುವಾಗ ಈ ಅವಘಡ ಸಂಭವಿಸಿದೆ. ಈ ಕುರಿತಂತೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.