ಭಾರತದ ಮೇಲೆ ಪಾಕಿಸ್ತಾನ ದಾಳಿ ; 15 ಜನ ಸಾವು, ಉದ್ವಿಗ್ನ ಪರಿಸ್ಥಿತಿ
ಜಮ್ಮು ಕಾಶ್ಮೀರ : ಪಾಕಿಸ್ತಾನ ವಿರುದ್ಧದ ಭಾರತ ವೈಮಾನಿಕ ದಾಳಿ ನಡೆಸಿದ ಬೆನ್ನಲ್ಲೇ ಪಾಕಿಸ್ತಾನ ಸೇನೆ ಜಮ್ಮು ಕಾಶ್ಮೀರ ಗಡಿ ನಿಯಂತ್ರಣ ರೇಖೆ ಹಾಗೂ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಗುಂಡಿನ ದಾಳಿ ನಡೆಸಿದ್ದು 15 ಭಾರತೀಯರು ಮೃತಪಟ್ಟಿದ್ದಾರೆ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ.
ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆ ಬಳಿ ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ 15 ಭಾರತೀಯರು ಮೃತಪಟ್ಟಿದ್ದು 43 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳು ಜಮ್ಮುವಿನ ಜಿಎಂಸಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ ಹಾಗೂ ರಾಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆ ದಾಳಿಗೆ ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಭಾರತ ನಡೆಸಿದ ಆಪರೇಷನ್ ಸಿಂಧೂರ ದಾಳಿ ಬೆನ್ನಲ್ಲೇ ಈ ಘಟನೆ ಸಂಭವಿಸಿದ್ದು ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಜಮ್ಮು ಕಾಶ್ಮೀರದ ಐದು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಮ್ಮು, ಸಾಂಬಾ, ಕಥುವಾ, ರಾಚೌರಿ ಮತ್ತು ಪೂಂಚ್ ನಲ್ಲಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.


