ಸಿಡಿಲಿನ ಹೊಡೆತಕ್ಕೆ ಇಬ್ಬರು ಮಹಿಳೆಯರು ಸಾವು
ಸವದತ್ತಿ : ಸಿಡಿಲಿನ ಹೊಡೆತಕ್ಕೆ ಇಬ್ಬರು ಮಹಿಳೆಯರು ಪ್ರಾಣ ಬಿಟ್ಟ ಘಟನೆ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾಮದಲ್ಲಿ ರವಿವಾರ ನಡೆದಿದೆ.
ಗಂಗವ್ವಾ ಜೀರಗವಾಡ (55) ಮತ್ತು ಕಲಾವತಿ ಜೀರಗವಾಡ (42) ಮೃತ ಮಹಿಳೆಯರು. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಗಂಗವ್ವ ಮತ್ತು ಕಲಾವತಿ ಸಂಜೆ ಮಳೆ ಆರಂಭವಾಗುತ್ತಿದ್ದಂತೆ ಜಮೀನಿನಲ್ಲಿ ಮೇವು ತೆಗೆದುಕೊಂಡು ಮನೆಗೆ ವಾಪಸ್ಸು ಬರುತ್ತಿದ್ದ ವೇಳೆ ಸಿಡಿಲು ಬಡಿದಿದೆ.
ಇಬ್ಬರು ಮಹಿಳೆಯರು ಸ್ಥಳದಲ್ಲಿ ಮೃತಪಟ್ಟಿದ್ದು, ಈ ಕುರಿತು ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


