ಟೆಸ್ಟ್ ಕ್ರಿಕೆಟ್ ಗೆ ವಿರಾಟ್ ಕೊಹ್ಲಿ ನಿವೃತ್ತಿ ಘೋಷಣೆ
ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ( Virat kohli ) ನಿವೃತ್ತಿ ಘೋಷಣೆ ಮಾಡಿದ್ದಾರೆ.
ಈಗಾಗಲೇ ಟಿ – 20 ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿರಾಟ್ ನಿವೃತ್ತಿ ಘೋಷಣೆ ಮಾಡಿದ್ದರು. ಸಧ್ಯ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.
123 ಟೆಸ್ಟ್ ಪಂದ್ಯ ಆಡಿರುವ ವಿರಾಟ್ ಕೊಹ್ಲಿ ಅವರು 9230 ರನ್ ಗಳಿಸಿದ್ದಾರೆ. ಕಳೆದ ಮೂರು ದಿನಗಳ ಹಿಂದೆಯಷ್ಟೇ ರೋಹಿತ್ ಶರ್ಮಾ ನಿವೃತ್ತಿ ಘೋಷಣೆ ಮಾಡಿದ್ದರು.


