ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ; ಹದಗೆಟ್ಟ ಕಾನೂನು ಸುವ್ಯವಸ್ಥೆ ವಿರುದ್ಧ ಡಾ. ಸೋನಾಲಿ ಆಕ್ರೋಶ
ಬೆಳಗಾವಿ : ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಯೋರ್ವಳ ಮೇಲೆ ಮೂವರು ಅಪ್ರಾಪ್ತ ಯುವಕರು ಅತ್ಯಾಚಾರ ಮಾಡಿರುವುದು ಮಹಿಳೆಯರಲ್ಲಿ ಆತಂಕ ಸೃಷ್ಟಿಸುವಂತೆ ಮಾಡಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್ ಹೇಳಿದರು.
ಮಂಗಳವಾರ ಸುದ್ದಿಗಾರರಿಗೆ ವಿಡಿಯೋ ಬಿಡುಗಡೆ ಮಾಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತದಲ್ಲಿದೆ. ಬೆಳಗಾವಿಯಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ. ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದರೂ ಇಲ್ಲಿಯವರೆಗೆ ಆರೋಪಿಗಳನ್ನು ಬಂಧಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.


