Select Page

Advertisement

ಹಿಡಿತ ಕಳೆದುಕೊಂಡ ಕತ್ತಿ ಕುಟುಂಬ ; ಹುಕ್ಕೇರಿ ವಿದ್ಯುತ್ ಸಂಘದ ನೂತನ ಅಧಿಪತಿ ಯಾರು….?

ಹಿಡಿತ ಕಳೆದುಕೊಂಡ ಕತ್ತಿ ಕುಟುಂಬ ; ಹುಕ್ಕೇರಿ ವಿದ್ಯುತ್ ಸಂಘದ ನೂತನ ಅಧಿಪತಿ ಯಾರು….?

ಬೆಳಗಾವಿ : ಮೂರು ದಶಕಗಳಿಂದ ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಹಿಡಿತ ಹೊಂದಿದ್ದ ಕತ್ತಿ‌ ಕುಟುಂಬ ಸಧ್ಯ ಒಂದೊಂದೇ ಸ್ಥಾನದಿಂದ ಕೆಳಗಿಳಿಯುತ್ತಿದೆ. ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷರ ವಿರುದ್ಧ ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿ ಸ್ವೀಕಾರಗೊಂಡಿದೆ.

ಹೌದು ಕತ್ತಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ ಕಲಗೌಡ ಪಾಟೀಲ ವಿರುದ್ಧ ಹತ್ತು ಸದಸ್ಯರು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರು.‌ ಇಂದು ನಡೆದ ಸಭೆಯಲ್ಲಿ ಅವಿಶ್ವಾಸ ಗಿತ್ತುವಳಿ ಅಂಗಿಕಾರಗೊಂಡಿದ್ದು ಕಲಗೌಡ ಪಾಟೀಲ ತಮ್ಮ ಅಧ್ಯಕ್ಷ ಸ್ಥಾನ ಕಳೆದುಕೊಂಡಿದ್ದಾರೆ.

ಶುಕ್ರವಾರದಂದು ಸಹಕಾರಿ ನಿಯಮಾವಳಿಯಂತೆ ನಡೆದ ಅವಿಶ್ವಾಸ ಮಂಡನೆ ಸಂದರ್ಭದಲ್ಲಿ ಅವಿಶ್ವಾಸದ ಪರವಾಗಿ 10 ಮತ್ತುಅದರ ವಿರುದ್ಧ 5 ನಿರ್ದೇಶಕರು ಮತ ಚಲಾಯಿಸಿದರು. ಅಧ್ಯಕ್ಷರ ವಿರುದ್ಧ ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿಗೆ 2/3 ಕ್ಕಿಂತ ಹೆಚ್ಚು ನಿರ್ದೇಶಕರಿದ್ದ ಮೇರೆಗೆ ಅಧ್ಯಕ್ಷರ ಸ್ಥಾನದಿಂದ ಕಲಗೌಡ ಪಾಟೀಲ ತೆರವಾಗಿದ್ದಾರೆ‌‌.

ಅವಿಶ್ವಾಸ ಗೊತ್ತುವಳಿ ಮಂಡನೆಗೆ ಮೂಲ ಕಾರಣ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರ ತಂತ್ರ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ತೆರವಾದ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಸಾಹೇಬ್ ಜೊಲ್ಲೆ ಆಪ್ತ ವಲಯದ ವ್ಯಕ್ತಿ ಬರುವ ಸಾಧ್ಯತೆ ದಟ್ಟವಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!