ಹೆದ್ದಾರಿಯಲ್ಲೇ ಮಹಿಳೆ ಜೊತೆ ಸೆಕ್ಸ್ ಮಾಡಿದ ಬಿಜೆಪಿ ನಾಯಕ ; ವೀಡಿಯೋ ವೈರಲ್…!
ಮಧ್ಯಪ್ರದೇಶದ ಮಂಡೌರ್ ಜಿಲ್ಲೆಯ ಬಿಜೆಪಿ ನಾಯಕ ಮನೋಹರ್ ಲಾಲ್ ಧಾಕರ್ ಎಂಬಾತ ಹೆದ್ದಾರಿಯಲ್ಲಿ ಮಹಿಳೆಯೊಂದಿಗೆ ಸೆಕ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಂಡ್ಸೌರ್ ಜಿಲ್ಲೆಯ ಬನಿ ಗ್ರಾಮದ ನಿವಾಸಿಯಾಗಿರುವ ಮನೋಹರ್ ಲಾಲ್ ಧಾಕಡ್, ಹೊಸದಾಗಿ ನಿರ್ಮಿಸಿದ 8 ಪಥದ ಹೆದ್ದಾರಿಯಲ್ಲಿ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದು, ಸುಮಾರು ಮೂರೂವರೆ ನಿಮಿಷಗಳ ವಿಡಿಯೋ ವೈರಲ್ ಆಗಿತ್ತು.
ಇದರ ಬೆನ್ನಲ್ಲೇ ಬಿಜೆಪಿ ನಾಯಕ ಮನೋಹರ್ ಲಾಲ್ ಧಕಾಡ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

