ಬೆಳಗಾವಿ : ಕಳೆದ ಒಂದು ತಿಂಗಳಲ್ಲಿ ಬೆಳಗಾವಿ ನಗರದಲ್ಲಿ ಎರಡು ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ.

ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಬಾಲಕಿಯನ್ನು ಅಪಹರಣ ಮಾಡಿ ನಿರಂತರವಾಗಿ ಎರಡೂ ದಿನಗಳ ಕಾಲ ಆರು ದುರುಳರು ಅತ್ಯಾಚಾರ ಮಾಡಿದ ಘಟನೆ ಭಾನುವಾರ ಬೆಳಕಿಗೆ ಬಂದಿದೆ.

ಅಪ್ರಾಪ್ತೆ ಚಾಲಕಿಯನ್ನು ಅಪಹರಣ ಮಾಡಿ ಗುಡ್ಡಗಾಡು ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ. ಆರು ಆರೋಪಿಗಳ ಪೈಕಿ ಐವರು ಆರೋಪಿಯಗಳನ್ನು‌ ಕಾಕತಿ ಪೊಲೀಸರು ಬಂಧಿಸಿದ್ದಾರೆ.

ಹದಿನೈದು ವರ್ಷದ ಬಾಲಕಿ ಮೇಲೆ ಎರಡು ಬಾರಿ ಸಾಮೂಹಿಕ ಅತ್ಯಾಚಾರ ಮಾಡಿರುವ ದುರುಳರು ಆರು ತಿಂಗಳ ಹಿಂದೆ ಸಾಮೂಹಿಕ ಅತ್ಯಾಚಾರ ಮಾಡಿ ವಿಡಿಯೋ ಮಾಡಿಕೊಂಡಿದ್ದರು. ಬಾಲಕಿಯನ್ನ ಸ್ನೇಹಿತ ಪುಸಲಾಯಿಸಿ ಗುಡ್ಡಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ.

ಬಳಿಕ ಅದೇ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಮತ್ತೊಮ್ಮೆ ಅತ್ಯಾಚಾರ ಮಾಡಿದ್ದಾರೆ. ಈ ವೇಳೆ ಕೂಡ ವಿಡಿಯೋ ಮಾಡಿಕೊಂಡಿದ್ದ ದುಷ್ಕರ್ಮಿಗಳು. ವಿಡಿಯೋ ಇಟ್ಟುಕೊಂಡು ಈಗ ಮತ್ತೆ ಬಾಲಕಿಗೆ ಬೆದರಿಕೆ ಹಿನ್ನೆಲೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಎಫ್‌ಐಆರ್ ದಾಖಲಾದ ಒಂದೇ ದಿನದಲ್ಲಿ ಮೂವರು ಆರೋಪಿಗಳ ಬಂಧನವಾಗಿದೆ. ಜೊತೆಗೆ ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ರೆಸಾರ್ಟ್ ಒಂದರಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಆಗಿತ್ತು. ಈ ಪ್ರಕರಣದಲ್ಲಿ ಇಬ್ಬರು ಬಾಲಾಪರಾಧಿ ಸೇರಿ ಐದು ಜನರ ಬಂಧನವಾಗಿತ್ತು.