RCB ವಿಜಯೋತ್ಸವ ವೇಳೆ ಕಾಲ್ತುಳಿತ ; ಸಾವಿನ ಸಂಖ್ಯೆ 11 ಕ್ಕೆ ಏರಿಕೆ
ಬೆಂಗಳೂರು : RCB ಸಂಭ್ರಮದ ಮಧ್ಯೆ ಕಾಲ್ತುಳಿತ ದುರಂತ ಸಂಭವಿಸಿದ್ದು ಸಧ್ಯ ಸಾವಿನ ಸಂಖ್ಯೆ ಎರಡಂಕಿ ದಾಟಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಮುಂಬಾಗ ಕಾಲ್ತುಳಿತ ಘಟನೆ ನಡೆದಿದ್ದು ಸಧ್ಯ ಸಾವಿನ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ. ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆ ನಡೆಯಬೇಕಿದ್ದ ಚಿನ್ನಸ್ವಾಮಿ ಕ್ರೀಡಾಂಗಣ ಸಾವಿನ ಮನೆಯಾಗಿದೆ.
50 ಕ್ಕೂ ಅಧಿಕ ಗಾಯಾಳುಗಳನ್ನು ಬೌರಿಂಗ್ ಹಾಗೂ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಧ್ಯದ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ.
ಸೂತಕದ ನಡುವೆ ಮುಂದುವರಿದ ಸಂಭ್ರಮಾಚರಣೆ ಕಾರ್ಯಕ್ರಮ : ಇತ್ತ ಕಾಲ್ತುಳಿತದಲ್ಲಿ 11 RCB ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದರೆ ಅತ್ತ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಟಗಾರರ ಸಹಿತ ಸಂಭ್ರಮಾಚರಣೆ ಕಾರ್ಯಕ್ರಮ ನಡೆಸಲಾಗುತ್ತಿದೆ.


