Select Page

Advertisement

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ; ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ; ಸಿಎಂ ಘೋಷಣೆ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ; ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ; ಸಿಎಂ ಘೋಷಣೆ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಮುಂಬಾಗ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು. ಅಪಾರ ಸಂಖ್ಯೆಯಲ್ಲಿ RCB ಅಭಿಮಾನಿಗಳು ಆಗಮಿಸಿದ್ದರ ಹಿನ್ನಲೆಯಲ್ಲಿ ಕಾಲ್ತುಳಿತ ಸಂಭವಿಸಿದೆ. ಕೇವಲ 35 ಸಾವಿರ ಸಾಮರ್ಥ್ಯದ ಕ್ರೀಡಾಂಗಣಕ್ಕೆ ಮೂರು ಲಕ್ಷ ಜನ ಬಂದಿದ್ದು ಸಮಸ್ಯೆಯಾಗಿದೆ ಎಂದರು.

ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರಕಾರ ಭರಿಸಲಿದೆ. ಜಿಲ್ಲಾಧಿಕಾರಿಗಳಿಂದ ಘಟನೆ ಕುರಿತು ನ್ಯಾಯಾಂಗ ತನಿಖೆ ನಡೆಸುವುದಾಗಿ ಸಿಎಂ ಹೇಳಿಕೆ ನೀಡಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!