Select Page

Advertisement

ಕಾಲ್ತುಳಿತ ದುರಂತದ ನಂತರವೂ ಸಂಭ್ರಮಾಚರಣೆ ; ಸರಕಾರದ ವಿರುದ್ಧ ಬಿಜೆಪಿ ಆಕ್ರೋಶ

ಕಾಲ್ತುಳಿತ ದುರಂತದ ನಂತರವೂ ಸಂಭ್ರಮಾಚರಣೆ ; ಸರಕಾರದ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದ ದುರಂತದ ನಂತರವೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಇತ್ತ ಚಿನ್ನಸ್ವಾಮಿ ಕ್ರೀಡಾಂಗಣದ ಒಂದು ಗೇಟ್ ಬಳಿ ಸಾವು ಬದುಕಿನ ಮಧ್ಯೆ ಅಭಿಮಾನಿಗಳು ನರಳಾಡುತ್ತಿದ್ದರೆ ಅತ್ತ RCB ತಂಡ ಸಂಭ್ರಮಾಚರಣೆಯಲ್ಲಿ ತೊಡಗಿತ್ತು. ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೂ ಭಾಗವಹಿಸಿದ್ದರು. ನೋವಿನ ಮಧ್ಯೆ ಕಾರ್ಯಕ್ರಮ ನಡೆಸುದ್ದಕ್ಕೆ ಬಿಜೆಪಿ ಆಕ್ರೋಶ ಹೊರಹಾಕಿದೆ.

ಘಟನೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಆಕ್ರೋಶ ಹೊರಹಾಕುದ್ದು, ಕಾಲ್ತುಳಿತ ಘಟನೆ ಹೊಣೆಯನ್ನು ಸಿಎಂ ಹಾಗೂ ಡಿಸಿಎಂ ಹೊತ್ತುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ ಘಟನೆ ಕುರಿತು ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!