ಗುಜರಾತ್ : ಅಹಮದಾಬಾದ್ ವಿಮಾನ ದುರಂತದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಿಲುಕಿದ್ದಾರೆ ಎಂಬ ಮಾಹಿತಿ ಬಯಲಾಗಿದೆ.

ದುರಂತಗೊಂಡ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ 12ನೇ ಸೀಟ್‌ನಲ್ಲಿ ಕುಳಿತು ಪ್ರಯಾಣ ಮಾಡುತ್ತಿದ್ದರು ಎಂದು ವರದಿ ಆಗಿದೆ.

ವಿಜಯ್ ರೂಪಾನಿ ಅವರ ಸಧ್ಯದ ಸ್ಥಿತಿಗತಿ ಕುರಿತು ಇನ್ನಷ್ಟು ಮಾಹಿತಿ ಹೊರಬರಬೇಕಿದೆ. ಇನ್ನೂ ದುರಂತದಲ್ಲಿ ಈಗಾಗಲೇ 110 ಕ್ಕೂ ಅಧಿಕ ಜನ ಪ್ರಾಣ ಕಳೆದುಕೊಂಡಿದ್ದಾರೆ.

ವಿಮಾನ ವೈದ್ಯಕೀಯ ವಿದ್ಯಾರ್ಥಿಗಳು ವಾಸವಿದ್ದ ಹಾಸ್ಟೆಲ್ ಗೆ ಡಿಕ್ಕಿಯಾಗಿದ್ದು ಅನೇಕ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಲಾಗಿದೆ.