ಕುಡಚಿ : ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಭಾನುವಾರ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದ ಹೊರವಲಯದ ಸಾಗರ ನಗರದಲ್ಲಿ ನಡೆದಿದೆ.
ಯಾಸೀನ ಜಾತಗಾರ (22) ಕೊಲೆಯಾದ ದುರ್ದೈವಿ. ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವೇ ಕೊಲೆಗೆ ಕಾರಣ ಎಂಬುದು ತಿಳಿದುಬಂದಿದೆ. ಕೊಲೆಗೈದ ಆರೋಪಿ ರೋಹಿತ್ ಜಾಧವ್ ಎಂಬಾತ ಪೊಲೀಸರಿಗೆ ಶರಣಾಗಿದ್ದಾನೆ.
ಘಟನಾ ಸ್ಥಳಕ್ಕೆ ಭೇಟಿ ನಿಡೀದ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೆದ್ ಮಾತನಾಡಿ. ಕೊಲೆ ಆರೋಪಿ ಈಗಾಗಲೇ ಪೊಲೀಸ್ ಠಾಣೆಗೆ ಶರಣಾಗಿದ್ದು, ಮೃತ ವ್ಯಕ್ತಿಯ ಸಂಬಂಧಿಕರು ಆರೋಪಿ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ಇನ್ನುಳಿದ ಇಬ್ಬರು ಮೇಲೆ ಸಂಶಯ ವ್ಯಕ್ತಪಡಿಸಿದ್ದು, ಕುಡಚಿ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದರು.
ಕುಡಚಿ : ವ್ಯಕ್ತಿಯನ್ನು ಕೊಚ್ಚಿ ಕೊಲೆಗೈದು ಠಾಣೆಗೆ ಶರಣಾದ ಯುವಕ



