ತಡರಾತ್ರಿ ಮಠದಲ್ಲಿ ಮಹಿಳೆ ; ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಕಳ್ಳ ಸ್ವಾಮಿ
ಮೂಡಲಗಿ : ಮಠದಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮಹಿಳೆ ಜೊತೆ ಕೊಠಡಿಯಲ್ಲಿ ಇದ್ದ ಸ್ವಾಮೀಜಿಯನ್ನು ತರಾಟೆಗೆ ತಗೆದುಕೊಂಡಿದ್ದು ಮಾತ್ರವಲ್ಲದೆ ಮಠದಿಂದ ಉಚ್ಚಾಟನೆ ಮಾಡಿರುವ ಘಟನೆ ತಾಲೂಕಿನ ಶಿವಾಪೂರ ( ಹ ) ಗ್ರಾಮದಲ್ಲಿ ಭಾನುವಾರ ನಡೆದಿದೆ.
ತಾಕೂಕಿನ ಶಿವಾಪೂರ (ಹ) ಗ್ರಾಮದ ಅಡವಿಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಬಂಧದ ಆರೋಪದ ಹಿನ್ನಲೆಯಲ್ಲಿ ಗ್ರಾಮಸ್ಥರು ಸ್ವಾಮೀಜಿಯನ್ನು ಮಠದಿಂದ ಬಹಿಷ್ಕಾರ ಹಾಕಿದ್ದಾರೆ. ಗ್ರಾಮದ ಹಿರಿಯದ ಸಮ್ಮುಖದಲ್ಲಿ ಪೀಠದಿಂದ ಉಚ್ಚಾಟನೆ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.
ಕಳೆದ ಶನಿವಾರ ಅಡವಿಸಿದ್ದೇಶ್ವರ ಮಠಕ್ಕೆ ವಿಜಯಪುರ ಜಿಲ್ಲೆಯ ತಾಳಿಕೋಟೆಯ ಮಹಿಳೆ ತನ್ನ ಮಗಳೊಂದಿಗೆ ಅಡವಿ ಸಿದ್ದೇಶ್ವರ ಮಠಕ್ಕೆ ಆಗಮಿಸಿದ್ದಳು. ಅದೇ ದಿನ ರಾತ್ರಿ 10 ಗಂಟೆಗೆ ಸ್ಥಳೀಯ ಯುವಕರು ಸ್ವಾಮೀಜಿಯ ಕೊಠಡಿಯೊಳಗೆ ಆ ಮಹಿಳೆ ಇರುವುದನ್ನು ನೋಡಿ ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಸ್ವಾಮಿಜಿ ಹಾಗೂ ಮಹಿಳೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಗ್ರಾಮದ ಪ್ರಮುಖರು ಯಾರು ಇಲ್ಲದ ವೇಳೆ ಆ ಮಹಿಳೆ ತಮ್ಮ ಕೊಠಡಿಯೊಳಗೆ ಇರುವುದು ಯಾಕೆ ಎಂದು ಸ್ವಾಮೀಜಿಯನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಸ್ವಾಮೀಜಿ ಕಥೆ ಕಟ್ಟಿದ್ದು ತಮ್ಮಿಂದ ಯಾವುದೇ ತಪ್ಪು ಆಗಿಲ್ಲವೆಂದು ಹೇಳಿದ್ದಾರೆ. ಇದಕ್ಕೆ ಒಪ್ಪದ ಗ್ರಾಮಸ್ಥರು, ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ತಡರಾತ್ರಿ ಆ ಮಹಿಳೆ ಮತ್ತು ಅವಳ ಮಗಳನ್ನು ಸಾಂತ್ವಾನ ಕೇಂದ್ರಕ್ಕೆ ಕಳುಹಿಸಿದ್ದಾರೆ.
ರವಿವಾರ ಗ್ರಾಮಸ್ಥರು ಮಠದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಯಾವುದೇ ಕಾರಣಕ್ಕೂ ಸ್ವಾಮೀಜಿ ಮಠದಲ್ಲಿ ಇರಲು ಅವಕಾಶ ಕೊಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆ ಸ್ವಾಮೀಜಿಯನ್ನು ಮಠದಿಂದ ಹೊರಹಾಕಲಾಗಿದೆ. ಈ ಸಂದರ್ಭದಲ್ಲಿ ಸಿಪಿಐ ಶ್ರೀಶೈಲ್ ಬ್ಯಾಕೋಡ್, ಪಿಎಸ್ಐ ರಾಜು ಪೂಜೇರಿ ಹಾಗೂ ಗ್ರಾಮದ ಮುಖಂಡರು ಇದ್ದರು.


