ಶಿವಾಪೂರ ಸ್ವಾಮೀಜಿ ವಿರುದ್ಧ ಸುಳ್ಳು ಆರೋಪ ; ಸಾಹುಕಾರ್ ನೇತೃತ್ವದಲ್ಲಿ ಸಭೆ, ತಪ್ಪಿತಸ್ಥರ ವಿರುದ್ಧ ಕ್ರಮ..!
ಗೋಕಾಕ್ : ಮೂಡಲಗಿ ತಾಲೂಕಿನ ಶಿವಾಪೂರ ಗ್ರಾಮದ ಮಠವೊಂದರಲ್ಲಿ ಮಹಿಳೆ ಪ್ರತ್ಯಕ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ವಿವಿಧ ಮಠಾಧೀಶರು ಸಭೆ ನಡೆಸಲಾಯಿತು.
ಶುಕ್ರವಾರ ಗೋಕಾಕ್ ನಗರದ ಶೂನ್ಯ ಸಂಪಾದನಾ ಮಠದಲ್ಲಿ ನಡೆದ ಸಭೆ ನಂತರ ಮಾತನಾಡಿದ ಶಾಸಕರು. ಪೂಜ್ಯರ ವಿರುದ್ಧ ಕೇಳಿಬಂದ ಆರೋಪ ಸತ್ಯಕ್ಕೆ ದೂರವಾದದ್ದು. ಈ ಕುರಿತು ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿರುವುದಾಗಿ ಹೇಳಿದರು.
ನನಗೆ ಬಂದ ಮಾಹಿತಿ ಮೇರೆಗೆ ಸಭೆ ನಡೆಸಲಾಗಿದೆ. ಸ್ವಾಮೀಜಿ ವಿರುದ್ಧ ಕೇಳಿಬಂದ ಆರೋಪ ಸತ್ಯಕ್ಕೆ ದೂರವಾಗಿದೆ. ಈ ಘಟನೆಯಿಂದ ಸ್ವಾಮೀಜಿಗಳಿಗೆ ನೋವಾಗಿತ್ತು. ಸ್ವಾಮೀಜಿ ಮೇಲೆ ಮಾಡಿರುವ ಆರೋಪ ಸುಳ್ಳಾಗಿದ್ದು ತಪ್ಪಿತಸ್ಥರ ವಿರುದ್ಧ ಕ್ರಮದ ಭರವಸೆ ನೀಡಿದರು.
ಮಠದಲ್ಲಿ ಅಂದು ಕುಡಿದು ಗಲಾಟೆ ಮಾಡಿರುವ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ತಿಳಿಸಿದ್ದೇನೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ ನೀಡಿದರು.


