ಬೆಳಗಾವಿ : ಸೆಂಟ್ರಲ್ ಬ್ಯಾಂಕಿನ ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಗವಾಡ ತಾಲೂಕಿನ ಉಗಾರ ಖುರ್ದ್ ನಲ್ಲಿ ನಡೆದಿದೆ.
ಆಂಧ್ರಪ್ರದೇಶ ಮೂಲದ ರವಿಕುಮಾರ್ ( 26 ) ಮೃತಪಟ್ಟ ದುರ್ದೈವಿ. ಸೆಂಟ್ರಲ್ ಬ್ಯಾಂಕಿನ ಉಗಾರ್ ಶಾಕೆಗೆ ತರಬೇತಿ ಪಡೆಯಲು ಕಳೆದ ಮೂರು ದಿನಗಳ ಹಿಂದೆ ಬಂದಿದ್ದ.
ನ್ಯಾಯವಾದಿ ಒಬ್ಬರ ಮನೆಯಲ್ಲಿ ಬಾಡಿಗೆ ಇದ್ದ ಯುವಕ ಬುಧವಾರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಾಗವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕಾಗವಾಡದಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆತ್ಮಹತ್ಯೆಗೆ ಶರಣು



