ಕುಡಚಿ : ಗಾಳಿಯಲ್ಲಿ ಗುಂಡು ಹಾರಿಸಿದ್ದ ಪಂಚಾಯತಿ ಸದಸ್ಯ ಅಂದರ್
ಕುಡಚಿ : ಹುಟ್ಟು ಹಬ್ಬದ ನಿಮಿತ್ತ ಗಾಳಿಯಲ್ಲಿ ಗುಂಡು ಹಾರಿಸಿ ಕೈಯಲ್ಲಿ ಮಾರಕಾಸ್ತ್ರ ಹಿಡಿದು ಸಂಭ್ರಮಾಚರಣೆ ಮಾಡಿದ್ದ ಗ್ರಾಮ ಪಂಚಾಯತಿ ಸದಸ್ಯನ ವಿರುದ್ಧ ಪ್ರಕರಣ ದಾಖಲಾಗಿದೆ.
ಪಂಚಾಯತ್ ಸದಸ್ಯ ಬಾಬಾಜಾನ್ ಖಾಲಿಮುಂಡಾಸೈ ಎಂಬಾತ ತನ್ನ ಹುಟ್ಟುಹಬ್ಬದ ಸಂಭ್ರಮಾಚರಣೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಅಷ್ಟೇ ಅಲ್ಲದೆ ಕೈಯಲ್ಲಿ ಮಾರಕಾಸ್ತ್ರ ಹಿಡಿದಿದ್ದಾರೆ.
ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿತ್ತು. ಈ ಕುರಿತು ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


