ಕಾಗವಾಡ : ಚಿಕಿತ್ಸೆಗೆಂದು ತೆರಳುವ ವೇಳೆ ಯೋಧ ಸಾವು
ಕಾಗವಾಡ : ಅನಾರೋಗ್ಯ ಹಿನ್ನಲೆಯಲ್ಲಿ ಚಿಕಿತ್ಸೆಗೆಂದು ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯ ಯೋಧ ಮೃತಪಟ್ಟ ಘಟನೆ ತಾಲೂಕಿನ ಶೇಡಬಾಳ ಗ್ರಾಮದಲ್ಲಿ ಬುಧವಾರ ನಡೆದಿದೆ.
ಮಹಾದೇವ ಪೂಜಾರಿ (45) ಮೃತ ಯೋಧ. ಅಸ್ಸಾಂ ಗುವಾಹಟಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಮನೆಗೆ ಬಂದಿದ್ದರು. ಈ ವೇಳೆ ಅನಾರೋಗ್ಯ ಉಂಟಾಗಿತ್ತು.
ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಬೆಳಗಾವಿ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಮೃತರ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವದೊಂದಿಗೆ ಸ್ವಗ್ರಾಮದಲ್ಲಿ ನೆರವೇರಿತು.
ಮೃತ ಯೋಧರು ತಾಯಿ, ಪತ್ನಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಇವರ ಅಗಲಿಕೆಗೆ ಗಣ್ಯರು ಸಂತಾಪ ಸೂಚಿಸಿದ್ದಾರೆ.


