ಹೃದಯಾಘಾತದಿಂದ ಪ್ರಾಣ ಕಳೆದುಕೊಂಡ IAS ಆಕಾಂಕ್ಷಿ ಜೀವಿತಾ…!
ಧಾರವಾಡ : ಯುಪಿಎಸ್ಸಿ ಗೆ ತಯಾರಿ ನಡೆಸುತ್ತಿದ್ದ 26 ವರ್ಷದ ಯುವತಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡದ ಪುರೋಹಿತ ನಗರದ ಜೀವಿತಾ ಕುಸಗೂರ ಹೃದಯಾಘಾತದಿಂದ ಸಾವಣಪ್ಪಿದ್ದಾರೆ. ಮಂಗಳವಾರ ಬೆಳಿಗ್ಗೆ ತೀವ್ರ ಸುಸ್ತಾದಂತೆ ಕಂಡ ಜೀವಿತಾಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗಿಲ್ಲ.
ಐಪಿಎಸ್ ಅಧಿಕಾರಿ ಆಗುವ ಕನಸು ಕಂಡಿದ್ದ ಜೀವಿತಾ ನಿರಂತರ ಓದು ಮುಂದುವರಿಸಿದ್ದಳು. ಯುವತಿ ಸಾವಿಗೆ ಕುಟುಂಬದಲ್ಲಿ ಆಕ್ರಂದನ ಮುಗಿಲುಮುಟ್ಟಿದೆ.


