ಚನ್ನಮ್ಮನ ಕಿತ್ತೂರು: ಶಾಸಕ ಬಾಬಾಸಾಹೇಬ ಪಾಟೀಲ ಅವರು ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ ಬಿಜೆಪಿ ಮಕ್ಕಳು ಎಂದು ಬೈಯ್ದು ಸ್ವಾಭಿಮಾನಕ್ಕೆ ದಕ್ಕೆ ಉಂಟು ಮಾಡಿದ್ದಾರೆ ಎಂದು ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಆರೋಪಿಸಿದ್ದಾರೆ.
ಇಲ್ಲಿಯ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೇಗಿನಹಾಳದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುವಾಗ, ಉದ್ದೇಶಪೂರ್ವಕವಾಗಿ ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ ಅವಮಾನ ಹಾಗೂ ಅಪಮಾನ ಮಾಡುವ ಉದ್ದೇಶದಿಂದ ಮತ್ತು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಸ್ವಾಭಿಮಾನಕ್ಕೆ ಧಕ್ಕೆ ಉಂಡು ಮಾಡಿದ್ದಾರೆ.
ಹೀಗಾಗಿ 16 ರ ಬುಧವಾರ ಮುಂಜಾನೆ 11 ಗಂಟೆಗೆ ಕುರುಗುಂದ ಗ್ರಾಮದಿಂದ ಪಾದಯಾತ್ರೆಯ ಮೂಲಕ ತೆರಳಿ ನೇಗಿನಹಾಳ ಗ್ರಾಮದಲ್ಲಿರುವ ಶಾಸಕ ಬಾಬಾಸಾಹೇಬ ಪಾಟೀಲ ಅವರ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲಾಗುತ್ತದೆ ಎಂದರು.
ರಾಜ್ಯ ಮಟ್ಟದ ಹಾಗೂ ಜಿಲ್ಲಾ ಮಟ್ಟದ ನಾಯಕರು ಸೇರಿದಂತೆ ಬೈಲಹೊಂಗಲ ಮತ್ತು ಕಿತ್ತೂರು ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಮುತ್ತಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಮಂಡಳ ಅಧ್ಯಕ್ಷ ಶ್ರೀಕರ ಕುಲಕರ್ಣಿ, ಜಿಲ್ಲಾ ಬಿಜೆಪಿ ಗ್ರಾಮೀಣ ಘಟಕದ ಪ್ರಧಾನ ಕಾರ್ಯದರ್ಶಿ ಸಂದೀಪ ದೇಶಪಾಂಡೆ, ಮುಖಂಡರಾದ ಬಸವರಾಜ ಪರವಣ್ಣವರ, ಲಕ್ಷ್ಮಿ ಇನಾಮದಾರ ಇದ್ದರು.
ನಾಲಿಗೆ ಹರಿಬಿಟ್ಟ ಕಿತ್ತೂರು ಶಾಸಕ ; ಬಿಜೆಪಿ ಕಾರ್ಯಕರ್ತರಿಂದ ಇಂದು ಕಚೇರಿ ಮುತ್ತಿಗೆ



