Select Page

Advertisement

ಬಾಲ್ಯ ವಿವಾಹ, ಐಪಿಎಸ್ ಅಧಿಕಾರಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಬಾಲ್ಯ ವಿವಾಹ, ಐಪಿಎಸ್ ಅಧಿಕಾರಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಬೆಳಗಾವಿ : ಅಪ್ರಾಪ್ತ ಬಾಲಕಿಗೆ ಮುಂದೆ ನಿಂತು ಮದುವೆ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ವಿರುದ್ಧ ಕೋರ್ಟ್ ನಲ್ಲಿ ಅರೋಪ ಪಟ್ಟಿ ಸಲ್ಲಿಕೆಯಾಗಿದೆ.

ಬೆಳಗಾವಿ ವಿಭಾಗದ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ಗಡಾದಿ ಸೇರಿ ಒಟ್ಟು ಎಂಟು ಜನರ ವಿರುದ್ಧ ಬಾಲ್ಯ ವಿವಾಹ ಮಾಡಿರುವ ಆರೋಪ ಮೇಲೆ ಚಾರ್ಜ್ ಶೀಟ್ ದಾಖಲಾಗಿದೆ.

ಅಪ್ರಾಪ್ತ ಬಾಲಕಿಗೆ ಬಾಲ್ಯ ವಿವಾಹ ಮಾಡಿಸಿದ್ದ ಆರೋಪದ ಕುರಿತು ಅಥಣಿ ತಾಲೂಕಿನ ಐಗಿಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಧ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಆರೋಪ‌ ಪಟ್ಟಿ ಸಲ್ಲಿಕೆಯಾಗಿದೆ.

ಮಾತ್ರವಲ್ಲದೆ ಬಾಲಕಿ ಹಾಗೂ ಆಕೆಯ ಕುಟುಂಬಕ್ಕೆ ಕಿರುಕುಳ ನೀಡುರುವ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು.


Advertisement

Leave a reply

Your email address will not be published. Required fields are marked *

error: Content is protected !!