Select Page

ನಾಳೆ ನಡೆಯಬೇಕಿದ್ದ ಕಾಂಗ್ರೆಸ್ ಪ್ರತಿಭಟನೆ ರದ್ದು ; ಕಾರಣ ಏನು..?

ನಾಳೆ ನಡೆಯಬೇಕಿದ್ದ ಕಾಂಗ್ರೆಸ್ ಪ್ರತಿಭಟನೆ ರದ್ದು ; ಕಾರಣ ಏನು..?

ಬೆಂಗಳೂರು : ಕಳೆದ ಲೋಕಸಭಾ ಚುನಾವಣೆ ವೇಳೆ ಅಕ್ರಮ ನಡೆದಿದೆ ಎಂದು ಆರೋಪಿಸಿ ನಾಳೆ ಬೆಂಗಳೂರಿನಲ್ಲಿ ನಡೆಯಲಿದ್ದ ಬೃಹತ್ ಪ್ರತಿಭಟನಾ ಸಮಾವೇಶ ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ನಿಧನದ ಹಿನ್ನಲೆಯಲ್ಲಿ ಮಂಗಳವಾರ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಾಲ್ಗೊಳ್ಳಬೇಕಿದ್ದ ಕಾಂಗ್ರೆಸ್ ಕಾರ್ಯಕ್ರಮ ರದ್ದುಗೊಳಿಸುವ ನಿರ್ಧಾರಕ್ಕೆ ಬಂದಿದೆ.

ಚುನಾವಣಾ ಆಯೋಗ ಸೇರಿದಂತೆ ಕೆಂದ್ರ ಸಂಸ್ಥೆಗಳು ಬಿಜೆಪಿ ಪರ ಕೆಲಸ ಮಾಡುತ್ತಿವೆ. ಕಳೆದ ಲೋಕಸಭಾ ಚುನಾವಣೆ ವೇಳೆ ಮತ ಕಳ್ಳತನ ನಡೆದಿರುವ ಸಾಕ್ಷಿ ನಮ್ಮ ಬಳಿ ಇದ್ದು ಹೋರಾಟಕ್ಕೆ ಇಳಿಯುತ್ತೇವೆ ಎಂದು ರಾಹುಲ್ ಗಾಂಧಿ ಎಚ್ಚರಿಕೆ ನೀಡಿದ್ದಾರೆ.


Advertisement

Leave a reply

Your email address will not be published. Required fields are marked *

error: Content is protected !!