ಬೆಳಗಾವಿ : ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಥಣಿ ತಾಲೂಕಿನ ಚಮಕೇರಿ ಗ್ರಾಮದ ಹನುಮಂತ ಪಡೋಲ್ಕರ್ ನಿಧನ ಹೊಂದಿದ್ದಾರೆ.

ಬೆಂಗಳೂರಿನಲ್ಲಿ ಡಿಎಆರ್ ನಲ್ಲಿ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಕೆಲ ದಿನಗಳ ಹಿಂದೆ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ತಲೆಗೆ ಪೆಟ್ಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಶನಿವಾರ ನಿಧನ ಹೊಂದಿದ್ದಾರೆ.