ಬೈಲಹೊಂಗಲ: ತಾಲ್ಲೂಕಿನ  ಬೆಳಗಾವಿ- ಬಾಗಲಕೋಟ ಮುಖ್ಯ ರಸ್ತೆಯ ಸೋಮನಟ್ಟಿ ಗ್ರಾಮದ ಬಳಿ ಮರಕ್ಕೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ  ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿ ಓರ್ವ ನು ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ನಡೆದಿದೆ.

ಬೆಳಗಾವಿ ತಾಲೂಕಿನ ಕರಿಕಟ್ಟಿ ಗ್ರಾಮದ  ಕಾರು ಚಾಲನೆ ಮಾಡುತ್ತಿದ್ದ   ಯುವಕ ಸಚಿನ ಯಲ್ಲಪ್ಪ ಬೋರಿಮರದ  (21) ಮತ್ತು  ಬಾಲಕೃಷ್ಣ ಬಸಪ್ಪ ಸುಲದಾಳ (19) ಮೃತರು.  ಲಕ್ಕಪ್ಪ ಯಲ್ಲಪ್ಪ ಬೋರಿಮರದ (23) ಗಾಯಗೊಂಡು ಬೆಳಗಾವಿ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಸ್ವಿಫ್ಟ್ ಡಿಸೈರ ಕಾರು ಯರಗಟ್ಟಿ ಕಡೆಯಿಂದ ಬೆಳಗಾವಿ ಕಡೆ ತೆರಳುವಾಗ ಸೋಮನಟ್ಟಿ ಗ್ರಾಮದ ಬಳಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಯಾಗಿ ಈ ದುರ್ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಡಿ ವೈ ಎಸ್ ಪಿ ಡಾ.ವೀರಯ್ಯ ಹಿರೇಮಠ, ಪಿ ಐ ಗಜಾನನ ನಾಯ್ಕ, ಪಿ ಎಸ್ ಐ ಈರಪ್ಪ ರಿತ್ತಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದರು. ಗಾಯಳುಗಳನ್ನು ಆಸ್ಪತ್ರೆ ಗೆ ಸಾಗಿಸುವಲ್ಲಿ ಪೊಲೀಸರು ಹಾಗೂ ಗ್ರಾಮಸ್ಥರು  ನೇರವಾದರು.

ನೇಸರಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.