ಸ್ವಾತಂತ್ರ್ಯ ದಿನಾಚರಣೆ ದಿನವೇ ಭೀಕರ ಸ್ಪೋಟ ; ಬಾಲಕ ಸಾವು
ಬೆಂಗಳೂರು : ಸ್ವಾತಂತ್ರ್ಯ ದಿನದ ಸಂಭ್ರಮಾಚರಣೆಯಲ್ಲಿ ರಾಷ್ಟ್ರ ತೊಡಗಿರುವ ವೇಳೆ ಬೆಂಗಳೂರಿನಲ್ಲಿ ಭೀಕರ ಸ್ಪೋಟ ಸಂಭವಿಸಿದ್ದು 8 ಕ್ಕೂ ಅಧಿಕ ಜನ ಗಂಭೀರವಾಗಿ ಗಾಯಗೊಂಡಿದ್ದು ಓರ್ವ ಬಾಲಕ ಮೃತಪಟ್ಟ ಘಟನೆ ನಡೆದಿದೆ.
ಬೆಂಗಳೂರು ನಗರದ ವಿಲ್ಸನ್ ಗಾರ್ಡನ್ ಚಿನ್ನಯ್ಯನಪಾಳ್ಯದಲ್ಲಿ ಸಿಲಿಂಡರ್ ಸ್ಟೋಟ ಸಂಭವಿಸಿದ್ದು 8 ಕ್ಕೂ ಅಧಿಕ ಮನೆಗಳು ಹಾನಿಗೊಳಗಾಗಿವೆ. ಈ ನಿಗೂಢ ಸ್ಪೋಟದಿಂದ ಸಾಕಷ್ಟು ಅನುಮಾನ ಮೂಡಿದೆ.
ಸ್ಪೋಟ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಅವರು ಭೇಟಿನೀಡಿ ಮಾಹಿತಿ ಕಲೆಹಾಕುತ್ತಿದ್ದಾರೆ. ಅಧಿಕಾರಿಗಳು ಘಟನೆ ಕುರಿತು ಸಿಎಂ ಅವರಿಗೆ ಮಾಹಿತಿ ನೀಡುವ ಕಾರ್ಯದಲ್ಲಿ ತೊಡಗಿದ್ದಾರೆ.


