ಸಿಎಂ ವಿರುದ್ಧ ಕೊಲೆ ಆರೋಪ ; ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಸಾಧ್ಯತೆ..!
ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಲೆ ಆರೋಪ ಮಾಡಿದ್ದ ಆರೋಪದಲ್ಲಿ ಸೌಜನ್ಯ ಪರ ಹೋರಾಟಗಾರ ಬೆಳ್ತಂಗಡಿ ತಾಲೂಕಿನ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕ್ರಮಕ್ಕೆ ಸರಕಾರ ಮುಂದಾಗಿದೆ.
ವಿಧಾನಸಭೆ ಅಧಿವೇಶನ ವೇಳೆ ವಿಪಕ್ಷಗಳು ವಿಷಯ ಪ್ರಸ್ತಾಪಿಸಿದ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪರಮೇಶ್ವರ. ಸಿಎಂ ವಿರುದ್ಧ ಗಂಭೀರ ಆರೋಪ ಮಾಡಿರುವ ಹಿನ್ನಲೆಯಲ್ಲಿ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.
ಸಧ್ಯ ದಕ್ಷಿಣ ಕನ್ನಡ ಪೊಲೀಸರಿಗೆ ಗೃಹ ಇಲಾಖೆಯಿಂದ ಖಡಕ್ ಸೂಚನೆ ನೀಡಿರುವ ಹಿನ್ನಲೆಯಲ್ಲಿ ತಿಮರೋಡಿ ವಿರುದ್ಧ ಕ್ರಮ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ದಟ್ಟವಾಗಿದೆ.


