Select Page

Advertisement

ಬೆಳಗಾವಿ : ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಬೆಳಗಾವಿ : ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಬೆಳಗಾವಿ : ಬೆಳಗಾವಿ ಬಿಮ್ಸ್ ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಬಿಮ್ಸ್ ನ ವಸತಿ ನಿಲಯದಲ್ಲಿ ಔಷಧಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವೈದ್ಯಕೀಯ ಬೆಂಗಳೂರಿನ ವಿದ್ಯಾರ್ಥಿನಿ ಪ್ರೀಯಾ (27) ಎಂದು ತಿಳಿದು ಬಂದಿದೆ. ಸೋಮವಾರ ಸಂಜೆಯವರೆಗೂ ಜಿಲ್ಲಾಸ್ಪತ್ರೆಯಲ್ಲಿ

ರೋಗಿಗಳ ತಪಾಸಣೆ ಕುರಿತು ಅಧ್ಯನ ಮಾಡಿದ್ದ ಪ್ರೀಯಾ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಭೇಟಿ ನೀಡಿದ ಬಿಮ್ಸ್ ನಿರ್ದೇಶಕ ಅಶೋಕ ಶೆಟ್ಟಿ ಬೆಂಗಳೂರು ಮೂಲದ ವೈದ್ಯಕೀಯ ವಿದ್ಯಾರ್ಥಿ ಪ್ರೀಯಾ ಮಾನಸಿಕ ರೋಗದಿಂದ ಬಳಲುತ್ತಿದ್ದಳು. ಆದ್ದರಿಂದ ಖಿನ್ನತೆಗೆ ಒಳಗಾಗಿದ್ದಳು ಎಂದು ತಿಳಿದು ಬಂದಿತ್ತು.

ಆದರೆ ಔಷಧಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಮರಣೋತ್ತರ ಪರೀಕ್ಷೆಯ ಬಳಿಕ ತಿಳಿದು ಬರಲಿದೆ ಎಂದು ಎಂದು ಬಿಮ್ಸ್ ನಿರ್ದೇಶಕ ಅಶೋಕ ತಿಳಿಸಿದರು‌. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!