Select Page

Advertisement

ಜಾತಿ ಗಣತಿ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಅರ್ಜಿ…!

ಜಾತಿ ಗಣತಿ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಅರ್ಜಿ…!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆಯ ಜಾತಿ ಗಣತಿ ಜಟಾಪಟಿ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ತರಾತುರಿಯಲ್ಲಿ ಸಮೀಕ್ಷೆಗೆ ಮುಂದಾಗಿದ್ದ ಸರಕಾರದ ನಿರ್ಧಾರಕ್ಕೆ ತೊಡಕಾಗುವ ಸಾಧ್ಯತೆ ದಟ್ಟವಾಗಿದೆ.

ಹೌದು ಈಗಾಗಲೆ ಜಾತಿ ಗಣತಿ ಕುರಿತು ಹಲವಾರು ಗೊಂದಲ ಸೃಷ್ಟಿಯಾಗಿದ್ದು 1,500 ಉಪಜಾತಿಗಳಿಗೆ ಪ್ರತ್ಯೇಕ ಅಸ್ತಿತ್ವ ನೀಡುತ್ತಿದೆ. ಅಷ್ಟೇ ಅಲ್ಲದೆ ಜಾತಿ ಗಣತಿ ನಡೆಸುವ ಹೊಣೆ ಕೇಂದ್ರಕ್ಕೆ ಮಾತ್ರ ಇದೆ ಎಂದು ಆರೋಪಿಸಿ ಸರಕಾರದ ನಿರ್ಧಾರ ರದ್ದುಪಡಿಸುವಂತೆ ಆಗ್ರಹಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಜಾತಿ ಗಣತಿ ರದ್ದತಿ ಕೋರಿ ಹೈಕೋರ್ಟ್ ನಲ್ಲಿ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿವೆ. ಅಷ್ಟೇ ಅಲ್ಲದೆ ಇದೇ ವಿಚಾರವಾಗಿ ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ಕರೆದಿದ್ದ ತುರ್ತು ಸಚಿವ ಸಂಪುಟ ಸಭೆಯಲ್ಲಿ ವಿರೋಧ ವ್ಯಕ್ತವಾಗಿದೆ ಎಂಬ ಮಾತು ಕೇಳಿಬಂದಿದೆ.

ಉಪಜಾತಿ ಗೊಂದಲಗಳನ್ನು ನಿವಾರಣೆ ಮಾಡಿ ನಂತರ ಜಾತಿ ಗಣತಿ ಮಾಡಬೇಕೆಂದು ಪ್ರತಿಪಕ್ಷಗಳು ಆರೋಪ‌ ಮಾಡುತ್ತಿದ್ದು ಹೈಕೋರ್ಟ್ ಯಾವ ಸೂಚನೆ ನೀಡುತ್ತದೆ ಎಂಬುದನ್ನು ಕಾದು ನೋಡಬೇಕು.

Advertisement

Leave a reply

Your email address will not be published. Required fields are marked *

error: Content is protected !!