
ಹುಕ್ಕೇರಿ ವಿದ್ಯುತ್ ಸಂಘದ ಚುನಾವಣೆ ; ಮತ ಎಣಿಕೆ ಆರಂಭ

ಬೆಳಗಾವಿ : ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಮತದಾನ ಪೂರ್ಣಗೊಂಡಿದ್ದು 67.54 ರಷ್ಟು ಮತದಾನವಾಗಿದೆ.
ಒಟ್ಟು 15 ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 32 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು 60,046 ಮತದಾರರ ಪೈಕಿ 41,050 ಜನ ತಮ್ಮ ಹಕ್ಕು ಚಲಾಯಿಸಿದ್ದು 67.54 ಶೇಕಡಾವಾರು ಮತದಾನವಾಗಿದೆ.
ಹುಕ್ಕೇರಿ ಪಟ್ಟಣದ ಬಾಪುಜಿ ಶಿಕ್ಷಣ ಸಂಸ್ಥೆಯ ಶಾಲೆಯಲ್ಲಿ ಭಾನುವಾರ ರಾತ್ರಿ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಪ್ರಾರಂಭಗೊಂಡಿದೆ.
ತಡರಾತ್ರಿ ವರೆಗೆ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ನಿರ್ದೇಶಕರ ಚುನಾವಣಾ ಫಲಿತಾಂಶ ಹೊರಬೀಳಲಿದೆ. ಈ ಕುರಿತು ಅಧಿಕಾರಿಗಳು ಸಂಪೂರ್ಣ ತಯಾರಿ ಮಾಡಿಕೊಂಡಿದ್ದಾರೆ.