Select Page

ಸಿಎಂ ಬದಲಾವಣೆ ; ಹೊಸ ಬಾಂಬ್ ಸಿಡಿಸಿದ ಆರ್. ಅಶೋಕ್

ಸಿಎಂ ಬದಲಾವಣೆ ; ಹೊಸ ಬಾಂಬ್ ಸಿಡಿಸಿದ ಆರ್. ಅಶೋಕ್

ಬೆಳಗಾವಿ : ನವೆಂಬರ್ ಅಥವಾ ಡಿಸೆಂಬರ್ ಒಳಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆ ಕಳೆದುಕೊಳ್ಳುವುದು ನೂರಕ್ಕೆ ನೂರರಷ್ಟು ನಿಜ ಎಂದು ವಿಪಕ್ಷ ನಾಯಕ ಆರ್. ಅಶೋಕ ಮತ್ತೊಮ್ಮೆ ಬಾಂಬ್ ಸಿಡಿಸಿದರು.

ಶುಕ್ರವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದ ಆಗಿರುವುದು ನಿಜ. ನವಂಬರ್, ಡಿಸೆಂಬರ್ ತಿಂಗಳಲ್ಲಿ ಕಾಂತ್ರಿ ಅಂತ ಹೇಳಿ ಒಬ್ಬರು ಸಚಿವರು ಈಗ ಮನೆಗೆ ಹೋಗಿದ್ದಾರೆ‌. ಈಗ ಜಗಳ ಆರಂಭವಾಗಿದೆ‌. ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಲ್ಲ, ಡಿಕೆಶಿ ಹಠ ಬಿಡುತ್ತಿಲ್ಲ ಎಂದರು.

ಕಾಂಗ್ರೆಸ್ ಜಗಳದಲ್ಲಿ ಸರ್ಕಾರ ಪತನವಾದ್ರೆ ನಾವೇನೂ ಸರ್ಕಾರ ಮಾಡಲ್ಲ. ನಾವು ಚುನಾವಣೆಗೆ ಹೋಗಲು ಸಿದ್ದರಿದ್ದೇವೆ‌. ಕಾಂಗ್ರೆಸ್ ಶಾಸಕರೇ ಅನುದಾನ ಬಂದಿಲ್ಲ ಎಂದು ಹೇಳುತ್ತಿದ್ದಾರೆ. ಬೆಂಗಳೂರಿನಲ್ಲಿ ಗುಂಡಿ ಇಲ್ಲದ ರಸ್ತೆ ತೋರಿಸಿದ್ರೆ ಬಹುಮಾನ ಕೊಡಬಹುದು ಎಂದು ವ್ಯಂಗ್ಯವಾಡಿದರು.

ಬೆಳೆ ಹಾನಿ, ಪ್ರವಾಹದ ಬಗ್ಗೆ ಬಿಜೆಪಿ ತಂಡ ಇಂದು ಭೇಟಿ ನೀಡಲಿದೆ. ಬೆಳಗಾವಿ, ವಿಜಯಪುರ ಜಿಲ್ಲೆಗಳಿಗೆ ಭೇಟಿ ನೀಡಲಿದೆ. ದಸರಾ ಹಬ್ಬ ಮನೆಯಲ್ಲಿ ಆಚರಣೆ ಮಾಡಲು ಆಗದೇ ಬೀದಿಯಲ್ಲಿ ಸಂತ್ರಸ್ತರು ನಿಂತಿದ್ದಾರೆ. ರಾಜ್ಯ ಸರ್ಕಾರ ಕುಂಭ ಕರ್ಣ ನಿದ್ದೆಯಲ್ಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಿಎಂ ಸಿದ್ದರಾಮಯ್ಯ ಗ್ಯಾಂಗ್‌ಗೆ ಜಾತಿ ಸಮೀಕ್ಷೆ ಮಾತ್ರ ಮುಖ್ಯವಾಗಿದೆ. ಜಾತಿಗಳ ಮಧ್ಯೆ ಬೆಂಕಿ ಹಚ್ಚುವುದೇ ಸಿದ್ದರಾಮಯ್ಯ‌ನ ಕಾಯಕವಾಗಿದೆ. ಸಿದ್ದರಾಮಯ್ಯ ಬೆಂಕಿ ಹಚ್ಚುವ ಮುಖ್ಯಮಂತ್ರಿ ಆಗಿದ್ದಾರೆ ಎಂದು ಕಿಡಿಕಾರಿದರು.

ಬೆಟ್ಟ ಕುಸಿತದಿಂದ ಹಾಸನದಲ್ಲಿ ವ್ಯಾಪಕವಾಗಿ ಹಾನಿ ಆಗಿದೆ. ಕೇಂದ್ರ ಸರ್ಕಾರ ನೆರವಿಗೆ ಬರಬೇಕು ಎನ್ನುವ ಡೈಲಾಗ್ ಸಿಎಂ ಹೊಡೆಯುತ್ತಿದ್ದಾರೆ. ಸಿಎಂ ಆದಾಗಿನಿಂದಲೂ ಸಿದ್ದರಾಮಯ್ಯ ಇದೇ ಡೈಲಾಗ್ ಹೊಡಿತ್ತಿದ್ದಾರೆ. ಕಳೆದ ಅನೇಕ ವರ್ಷಗಳಿಂದ ಇದೇ ಡೈಲಾಗ್ ಹೊಡೆದಿದ್ದಾರೆ ಎಂದರು.

ಮಳೆಯಿಂದ ಎಷ್ಟು ಹಾನಿಯಾಗಿದೆ ಎಂಬ ವರದಿ ಕೇಂದ್ರಕ್ಕೆ ಕಳುಹಿಸಬೇಕು. ಕೇಂದ್ರ ಗೃಹ ಸಚಿವ, ಕೃಷಿ ಸಚಿವರನ್ನು ರಾಜ್ಯದ ನಾಯಕರು ಈವರೆಗೆ ಭೇಟಿ ಮಾಡಿಲ್ಲ. ಸಿಎಂ, ಸಚಿವರು ಬೇಜವಾಬ್ದಾರಿಯಿಂದ ಇದ್ದಾರೆ. ಮನೆಗಳು ಎಷ್ಟು ಹಾನಿಯಾಗಿದೆ ಎಂಬ ಬಗ್ಗೆ ಸಿಎಂ ಬಾಯಿಯಿಂದ ಬಂದಿಲ್ಲ‌. ನಾನೇ ಸಿಎಂ ಆಗಿ ಮುಂದುವರೆಯುತ್ತೇನೆಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಯಾವಾಗ ಇಳಿತೀರಾ ಎಂದು ಅಲ್ಲಿನ ನಾಯಕರು ಕೇಳುತ್ತಿದ್ದಾರೆ ಎಂದರು.
ಜವಾಬ್ದಾರಿ ಇದ್ರೆ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಬೇಕಿತ್ತು.

ರಾಜ್ಯದಲ್ಲಿ ಪದೇ ಪದೇ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಆಗುತ್ತಿದೆ. ಇದೊಂದು ತುಘಲಕ್ ಸರ್ಕಾರ. ಕಾಂಗ್ರೆಸ್ ಸರ್ಕಾರ ಶೇ 80 ಪರ್ಸಂಟ್ ಸರ್ಕಾರ ಎಂದು ಗುತ್ತಿಗೆದಾರ ಸಂಘ ಹೇಳಿದೆ. ಲೂಟಿ ಮಾಡಲು ಎಲ್ಲಾ ಸಚಿವರು ಕಾದು ನೋಡುತ್ತಿದ್ದಾರೆ ಎಂದರು.

Advertisement

Leave a reply

Your email address will not be published. Required fields are marked *

error: Content is protected !!