ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಎಫ್ಐಆರ್
ಬೆಳಗಾವಿ : ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಪ್ರಕರಣ ದಾಖಲಾಗಿದೆ.
ಒಂದು ಸಮುದಾಯಕ್ಕೆ ಅವಾಚ್ಯ ಪದಬಳಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ರಾಜಶೇಖರ ತಳವಾರ ನೀಡಿದ ದೂರಿನಂತೆ ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಆದರೆ ಈ ಘಟನೆ ಕುರಿತು ರಮೇಶ್ ಕತ್ತಿ ಸ್ಪಷ್ಟನೆ ನೀಡಿದ್ದು ನನ್ನ ಹೇಳಿಕೆ ತಿರುಚಲಾಗಿದೆ. ಈ ಕುರಿತು ವಿಷಾದ ವ್ಯಕ್ತಪಡಿಸುವುದಾಗಿ ಸ್ಪಷ್ಟನೆ ನೀಡಿದ್ದಾರೆ.


