ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿ ಸಿಎಂ ; ಯತಿಂದ್ರ ಹೊಸ ಬಾಂಬ್

ಬೆಳಗಾವಿ : ಸಿಎಂ ಸಿದ್ದರಾಮಯ್ಯನವರು ರಾಜಕೀಯ ಬದುಕಿನ ಕೊನೆ ಘಟ್ಟದಲ್ಲಿ ಇದ್ದಾರೆ. ಅವರ ಮುಂದಿನ ನೇತೃತ್ವ ವಹಿಸುವ ಶಕ್ತಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಇದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಡಾ. ಯತೀಂದ್ರ ಸಿದ್ದರಾಮಯ್ಯ ಸಿಎಂ ಬದಲಾವಣೆ ಸುಳಿವು ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದಲ್ಲಿ ನಡೆದ ಕನಕದಾಸರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ತಂದೆಯವರು ರಾಜಕೀಯ ಕೊನೆ ಘಟ್ಟದಲ್ಲಿ ಇದ್ದು ಅವರ ನಂತರ ನೇತೃತ್ವವನ್ನು ಸಚಿವ ಸತೀಶ್ ಜಾರಕಿಹೊಳಿ ವಹಿಸಿಕೊಳ್ಳುವ ಮೂಲಕ ಪಕ್ಷ ಮುನ್ನಡೆಸುತ್ತಾರೆ ಎಂದರು.
ವೈಚಾರಿಕತೆ ಹಾಗೂ ಪ್ರಗತಿಪರ ಚಿಂತನೆ ಹೊಂದಿರುವ ಸತೀಶ್ ಜಾರಕಿಹೊಳಿ ಅವರು ಸಿಎಂ ಸಿದ್ದರಾಮಯ್ಯ ಅವರ ನಂತರ ಪಕ್ಷದ ನೇತೃತ್ವ ವಹಿಸಲು ಸೂಕ್ತ ನಾಯಕರಾಗಿದ್ದಾರೆ ಎಂದು ಹೇಳುವ ಮೂಲಕ ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಎಂದು ಪರೋಕ್ಷವಾಗಿ ಹೇಳಿದರು.
ಈ ಸಂದರ್ಭದಲ್ಲಿ ಸಚಿವ ಸತೀಶ್ ಜಾರಕಿಹೊಳಿ, ವಿನಯ್ ನಾವಲಗಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.



