ತೀವ್ರಗೊಂಡ ರೈತರ ಹೋರಾಟ ; ಅಖಾಡಕ್ಕೆ ವಿಜಯೇಂದ್ರ
ಬೆಳಗಾವಿ : ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅಖಾಡಕ್ಕೆ ಧುಮುಕಿದ್ದಾರೆ.
ಬೆಳಗಾವಿ ಜಿಲ್ಲಾ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ ನಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ವಿಜಯೇಂದ್ರ ಆಗಮಿಸಲಿದ್ದಾರೆ. ಇವರ ಆಗಮನದ ಹಿನ್ನಲೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಕಬ್ಬಿಗೆ 3,500 ರು. ಬೆಲೆ ನೀಡಬೇಕೆಂದು ರೈತರ ಆಗ್ರಹವಾಗಿದೆ. ಈಗಾಗಲೇ ಸಕ್ಕರೆ ಕಾರ್ಖಾನೆಗಳು 3,200 ರೂ. ಕೊಡಲು ಒಪ್ಪಿಗೆ ಸೂಚಿಸಿದ್ದಾರೆ. ಇದಕ್ಕೆ ರೈತರು ಒಪ್ಪದ ಹಿನ್ನಲೆಯಲ್ಲಿ ಪ್ರತಿಭಟನೆ ಮುಂದುವರಿದಿದೆ.

