ಕೈ ಮೀರಿದ ರೈತ ಹೋರಾಟ ; ಪೊಲೀಸರನ್ನು ಬೆನ್ನಟ್ಟಿ ಕಲ್ಲು ತೂರಿದ ಉದ್ರಿಕ್ತರು
ಬೆಳಗಾವಿ : ಜಿಲ್ಲೆಯಲ್ಲಿ ಕಬ್ಬು ಬೆಳೆ ಹೋರಾಟದ ಕಿಚ್ಚು ಹೆಚ್ಚಾಗಿದ್ದು ಪೊಲೀಸರನ್ನು ಬೆನ್ನಟ್ಟಿ ಕಲ್ಲು ಎಸೆದ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆ ಹತ್ತರಗಿಯ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದ ರೈತರು ವಾಹನಗಳಿಗೆ ಕಲ್ಲು ಎಸೆದಿದ್ದಾರೆ. ಈ ವೇಳೆ ಉದ್ರಿಕ್ತರ ಗುಂಪು ಪೊಲೀಸರ ಮೇಲೆ ಕಲ್ಲು ಎಸೆದಿದ್ದಾರೆ.
ಭಯದಿಂದ ಪೊಲೀಸರು ಪಕ್ಕದ ಜಮೀನಿನಲ್ಲಿ ಅಡಗಿ ಕುಳಿತಿದ್ದು ಬೆನ್ನಟ್ಟಿದ ಹೋರಾಟಗಾರರು ಕಲ್ಲು ತೂರಿದ್ದಾರೆ. ಈ ಸಂದರ್ಭದಲ್ಲಿ ಅಸಹಾಯಕತೆಯಿಂದ ಪೊಲೀಸರು ಕಾಲ್ಕಿತ್ತಿದ್ದಾರೆ.


