ಬೆಂಗಳೂರು : ಕನ್ನಡದ ಖ್ಯಾತ ಹಾಸ್ಯನಟ ಉಮೇಶ್ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಆರೋಗ್ಯ ಸಮಸ್ಸೆಯಿಂದ ಬಳಲುತ್ತಿದ್ದ ಇವರು, ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಭಾನುವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕಳೆದ 6 ದಶಕಗಳಿಂದ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಉಮೇಶ್ ಅವರು ತಮ್ಮ ಹಾಸ್ಯದ ಮೂಲಕ ಜನರ ಮನೆಮಾತಾಗಿದ್ದರು.
350 ಕ್ಕೂ ಅಧಿಕ ಚಲನಚಿತ್ರದಲ್ಲಿ ನಟಿಸಿರುವ ಇವರಿಗೆ ಅನೇಕ ಪ್ರಶಸ್ತಿಗಳು ಲಭಿಸಿವೆ. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಇವರು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಹಾಸ್ಯನಟ ಉಮೇಶ್ ನಿಧನ



